- Advertisement -
![]()
- Advertisement -
ಮಂಗಳೂರು: ಅನೈತಿಕ ಪೊಲೀಸ್‌ಗಿರಿಗೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಕದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕದ್ರಿ ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜೊಂದರ ಸಮೀಪದಲ್ಲಿ ಬುಧವಾರ ಸಂಜೆಯ ವೇಳೆ ಯುವ ಜೋಡಿಯೊಂದು ನಿಂತಿದ್ದಾಗ ಸಂಘಪರಿವಾರದ ಕಾರ್ಯಕರ್ತರು ಜೋಡಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವ ಜೋಡಿಯನ್ನು ಥಳಿಸಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


