Thursday, June 4, 2026
Homeಕರಾವಳಿಸುಳ್ಯದಲ್ಲಿ ಅನೈತಿಕ ಪೊಲೀಸ್ ಗಿರಿ; ಅನ್ಯಕೋಮಿನ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ

ಸುಳ್ಯದಲ್ಲಿ ಅನೈತಿಕ ಪೊಲೀಸ್ ಗಿರಿ; ಅನ್ಯಕೋಮಿನ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ

- Advertisement -
- Advertisement -

ಸುಳ್ಯದಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣವೊದುಂ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಯುವಕನೊಬ್ಬನಿಗೆ ಹಲ್ಲೆ ಮಾಡಲಾಗಿದೆ.

ಸುಳ್ಯ ತಾಲೂಕಿ‌ನ ತೊಡಿಕಾನದಲ್ಲಿ  ಕೇರಳದ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್(39) ಎಂಬಾತ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದಾನೆ. ಆ.12ರಂದು ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಕಾರಣ ಆಕೆಗೆ ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ, ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ತೊಡಿಕಾನಕ್ಕೆ ತೆರಳಿದ್ದಾಗ 5 ಜನ ಆರೋಪಿಗಳು ಕಾರು ಮತ್ತು ಸ್ಕೂಟರ್ ಮೂಲಕ ಕಾರನ್ನು ತಡೆದು ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ತೆರಳಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಅದರಂತೆ ಲತೀಶ್ ಗುಂಡ್ಯ, ವರ್ಷಿತ್ ಹಾಗೂ ಪುನೀತ್  ಹಾಗೂ ಇತರೆ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು. ಬಳಿಕ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಡ ರಾತ್ರಿ ಸುಳ್ಯ ಠಾಣೆಗೆ ಬಂದು ಅವರು ಬಿಡುಗಡೆ ಮಾಡಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!