- Advertisement -
- Advertisement -
ಚಿಕ್ಕಮಗಳೂರು : ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅನ್ನು ಅಮಾನತು ಮಾಡಲಾಗಿದೆ. ವಸತಿ ಶಾಲೆಯ ಪ್ರಿನ್ಸಿಪಾಲ್ ರಜನಿ, ವಾರ್ಡನ್ ಸುಂದರ್ ನಾಯ್ಕ್ ಎಂಬವರನ್ನು ಅಮಾನತು ಮಾಡಲಾಗಿದೆ. ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅವರು ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಶಾಲೆಯ ಇತರೆ ಇಬ್ಬರು ಶಿಕ್ಷಕರನ್ನು ಬೇರೆ ಶಾಲೆಗೆ ನಿಯೋಜನೆಗೊಳಿಸಿದ್ದಾರೆ.
2025 ಜೂನ್ 29ರಂದು ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು. 2023 ಜುಲೈ 27ರಂದು ಅಮೂಲ್ಯ, ಆತ್ಮಹತ್ಯೆ ಮಾಡಿಕೊಂಡಿದ್ದರು. ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು.ಉನ್ನತ ತನಿಖೆ ನಡೆಸುವಂತೆ ಸ್ಥಳಿಯರು, ಸಾರ್ವಜನಿಕರು ಆಗ್ರಹಿಸಿದ್ದರು.
- Advertisement -