Friday, April 19, 2024
Homeತಾಜಾ ಸುದ್ದಿಮುಂಬೈ: ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಕೋವಿಡ್ ಪ್ರಕರಣಗಳು ವರದಿ- ಮತ್ತೆ ಲಾಕ್ ಡೌನ್...

ಮುಂಬೈ: ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಕೋವಿಡ್ ಪ್ರಕರಣಗಳು ವರದಿ- ಮತ್ತೆ ಲಾಕ್ ಡೌನ್ ಸಾಧ್ಯತೆ

spot_img
- Advertisement -
- Advertisement -

ಮುಂಬೈ: ನಗರದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ವರದಿಯಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚಾದ ಕಾರಣ ಲಾಕ್ ಡೌನ್ ಬಹುತೇಕ ಖಚಿತ ಎನ್ನಲಾಗಿದೆ.

ಮುಂಬೈನಲ್ಲಿ 20,181 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಂದೇ ದಿನದಲ್ಲಿ ಶೇಕಡಾ 33ರಷ್ಟು ಸೋಂಕು ಪ್ರಕರಣಗಳು ಹೆಚ್ಚಾಗಿದೆ. ನಾಲ್ಕು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಹೊಸ ಪ್ರಕರಣಗಳಲ್ಲಿ, 85 ಪ್ರತಿಶತವು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಆದರೆ 1,170 ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 106 ಜನರು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಆರೋಗ್ಯ ಸಚಿವರು, ಆರೋಗ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳ ನಡುವಿನ ಸಭೆಯಲ್ಲಿ ಲಾಕ್‌ಡೌನ್ ವಿಷಯವನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ, “ಸರ್ಕಾರವು ಮುಂಬೈ ಪರಿಸ್ಥಿತಿಯನ್ನು ಬಹಳ ಎಚ್ಚರಿಕೆಯಿಂದ ಅಧ್ಯಯನ ಮಾಡುತ್ತಿದೆ, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

- Advertisement -
spot_img

Latest News

error: Content is protected !!