Friday, November 8, 2024
Homeಕರಾವಳಿಉಡುಪಿಉಡುಪಿಯಲ್ಲಿ ಕಲುಷಿತ ನೀರು ಸೇವಿಸಿ ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

ಉಡುಪಿಯಲ್ಲಿ ಕಲುಷಿತ ನೀರು ಸೇವಿಸಿ ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

spot_img
- Advertisement -
- Advertisement -

ಉಡುಪಿ: ಕಲುಷಿತ ನೀರು ಸೇವಿಸಿ ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ, ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ  ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಇನ್ನು 80 ವರ್ಷದ ವೃದ್ಧರೊಬ್ಬರ ಸ್ಥಿತಿ ಗಂಭೀರದ್ದು ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ದೌಡಾಯಿಸಿದ್ದಾರೆ. ನೀರು ಕಲುಷಿತಗೊಳ್ಳಲು ಏನ್ ಕಾರಣ ಅನ್ನೋ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!