- Advertisement -
![]()
- Advertisement -
ಮಂಗಳೂರು: ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್ ವಿವಾದ ಮುಂದುವರಿದಿದೆ. ಇಂದೂ ಕೂಡ 10ಕ್ಕೂ ಅಧಿಕ ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ ಎನ್ನಲಾಗಿದೆ.
ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಸೋಮವಾರ ದ.ಕ. ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಈ ವೇಳೆ ಜಿಲ್ಲಾಧಿಕಾರಿ ಮಂಗಳೂರು ವಿವಿಯ ಸಿಂಡಿಕೇಟ್ ಸಭೆಯ ತೀರ್ಮಾನವನ್ನು ಪಾಲಿಸುವಂತೆ ಸೂಚಿಸಿದ್ದರು. ಆದಾಗ್ಯೂ ವಿದ್ಯಾರ್ಥಿನಿಯರು ಕಳೆದ ಎರಡು ದಿನದಿಂದ ಕಾಲೇಜಿಗೆ ಆಗಮಿಸಿಲ್ಲ ಎನ್ನಲಾಗಿದೆ.
- Advertisement -


