Monday, June 8, 2026
Homeತಾಜಾ ಸುದ್ದಿಉಕ್ರೇನ್ ನಿಂದ ಬೆಂಗಳೂರಿಗೆ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಿಎಂ...

ಉಕ್ರೇನ್ ನಿಂದ ಬೆಂಗಳೂರಿಗೆ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಿಎಂ ಗೌರವ ನಮನ

- Advertisement -
- Advertisement -

ಬೆಂಗಳೂರು: ರಷ್ಯಾ ಶೆಲ್ ದಾಳಿಯಿಂದಾಗಿ ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ‌ ತರಲಾಗಿದೆ. ಪೋಲೆಂಡ್ ನ ವಾರ್ಸಾ ಗಡಿ ಮೂಲಕ ದುಬೈ ಮಾರ್ಗವಾಗಿ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ.

ನವೀನ್ ಗ್ಯಾನಗೌಡರ್ ಅವರ ಪಾರ್ಥೀವ ಶರೀರಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಪೂರ್ವಕ‌ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಹಾವೇರಿ ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ್ ಕುಮಾರ್, ಸಲಿಂ ಮಹಮದ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಹಾಗೂ ಇತರರು ಉಪಸ್ಥಿತರಿದ್ದರು.

ಬೆಂಗಳೂರಿನಿಂದ ಆಂಬ್ಯುಲೆನ್ಸ್ ಮೂಲಕ ಪಾರ್ಥಿವ ಶರೀರವನ್ನು ಹಾವೇರಿಗೆ ಕೊಂಡೊಯ್ಯಲಾಗಿದ್ದು, ಅಂತಿಮ ದರ್ಶನದ ಬಳಿಕ ದಾವಣಗೆರೆಯ ಎಸ್ ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುತ್ತದೆ.

- Advertisement -

Latest News

error: Content is protected !!