ಕಡಬ : ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಅಜ್ಜಾವರ ನಿವಾಸಿಯಾದ N M ಅಜೀಜ್ ಬಂಧಿತ ಆರೋಪಿ.
ಈತನಿಗೆ ಕರ್ನಾಟಕ ಉಚ್ಚ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿರುತ್ತದೆ. ಆರೋಪಿಯು 2018 ರಲ್ಲಿ ಕೇರಳ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದು, ನಂತರ ಕಲಬುರಗಿ ಜೇವರ್ಗಿ ನಿವಾಸಿ ಬಸವರಾಜು ಎಂಬುದಾಗಿ ಹೆಸರು ಬದಲಿಸಿಕೊಂಡು ಆಂಧ್ರಪ್ರದೇಶದಲ್ಲಿ ವಾಸವಾಗಿರುತ್ತಾನೆ. ಈತನ ಪತ್ತೆಗಾಗಿ ಸತತವಾಗಿ ಪ್ರಯತ್ನಿಸಲಾಗಿ, ಈತನು ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ದೃಢಪಟ್ಟಿರುತ್ತದೆ. ಸಂಬಂಧಪಟ್ಟ ನ್ಯಾಯಾಲಯದಿಂದ ಬಾಡಿವಾರಂಟ್ ಮೂಲಕ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಆರೋಪಿ ೦3 ಕೊಲೆ ಪ್ರಕರಣ, 10 ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು, ಈತನ ಪತ್ತೆಯಿಂದ ಕೇರಳದ ೦3 LPC ಪ್ರಕರಣ, ಸುಳ್ಯ ಠಾಣೆಯ ೦2 LPC ಪ್ರಕರಣ, ಕಡಬ ಠಾಣೆಯ ೦1 ಕನ್ವಿಕ್ಷನ್ ವಾರಂಟ್ ಪ್ರಕರಣಗಳು ಪತ್ತೆಯಾಗಿರುತ್ತದೆ.


