Friday, May 17, 2024
Homeಕರಾವಳಿಬಂಟ್ವಾಳ; ಸುಮಾರು 17 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯ ಬಂಧನ

ಬಂಟ್ವಾಳ; ಸುಮಾರು 17 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಬಂಟ್ವಾಳ; ಸುಮಾರು 17 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಉಮ್ಮರ್ ಫಾರೂಕ್ ಬಂಧಿತ ಆರೋಪಿ.


ಉಮ್ಮರ್ ಫಾರೂಕ್ ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ಸುಮಾರು 17 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ, ಕೋಣಾಜೆ, ಬರ್ಕೆ, ವಿಟ್ಲ, ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಈತನ ವಿರುದ್ದ ಪ್ರಕರಣ ದಾಖಲಾಗಿದೆ.


ಇಂದು ಬೆಳಿಗ್ಗೆ ಈತ ಮಾಣಿ ಪರಿಸರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪೋಲೀಸರು ಈತನನ್ನು ಬಂಧಿಸಿದ್ದಾರೆ. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -
spot_img

Latest News

error: Content is protected !!