Wednesday, April 24, 2024
Homeತಾಜಾ ಸುದ್ದಿಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ ಹಾಗೂ ಮಕ್ಕಳಿಬ್ಬರು ಸಾವು

ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ ಹಾಗೂ ಮಕ್ಕಳಿಬ್ಬರು ಸಾವು

spot_img
- Advertisement -
- Advertisement -

ತುಮಕೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ  ತುಮಕೂರು ತಾಲೂಕು ಕೋರಾ ಪೊಲೀಸ್ ಠಾಣೆ ಸರಹದ್ದಿನಲ್ಲಿಂದು ನಡೆದಿದೆ.

ಇಲ್ಲಿನ ತುಳಸಿಪುರ ಗ್ರಾಮದ ಸಮೀಪವಿರುವ ತಿರುಮಲಪಾಳ್ಯದ ವಾಸಿ ಕುಮಾರ್ ಎಂಬವರ ಪತ್ನಿ ಹೇಮಲತಾ (34) ಹಾಗೂ ಮಕ್ಕಳಾದ ಮಾನಸ (6), ಪೂರ್ವಿಕ (3) ಎಂಬುವರೇ ಬಾವಿಗೆ ಬಿದ್ದು ಸಾವನ್ನಪ್ಪಿರುವ ದುರ್ದೈವಿಗಳು.

ಇಂದು ಪೌರ್ಣಾಮಿಯಾದ ಪ್ರಯುಕ್ತ ತೋಟಕ್ಕೆ ಮೊಸರನ್ನ ಎಡೆ ಇಡಲೆಂದು ಹೋಗಿದ್ದಾರೆ. ಆ ವೇಳೆ ಮೊದಲನೆ ಮಗಳು ಮಾನಸ ಬಾವಿಯ ದಡದಲ್ಲಿದ್ದ ಸೀಬೆಹಣ್ಣಿನ ಮರದಲ್ಲಿ ಸೀಬೆಹಣ್ಣು ಕೊಯ್ಯಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾಳೆ. ಆ ಸಂದರ್ಭದಲ್ಲಿ ಜತೆಯಲ್ಲೇ ಇದ್ದ ಮತ್ತೊಂದು ಮಗು ಪೂರ್ವಿಕಾಳು ಅಕ್ಕನಂತೆಯೇ ಬಾವಿಗೆ ಬಿದ್ದಿದ್ದಾಳೆ. ತನ್ನ ಇಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದನ್ನು ನೋಡಿದ ತಾಯಿ ಹೇಮಲತಾ ಮಕ್ಕಳನ್ನು ರಕ್ಷಿಸಲೆಂದು ಬಾವಿಗೆ ಹಾರಿದ್ದಾರೆ. ದುರಾದೃಷ್ಟವಶಾತ್ ತಾಯಿ ಮತ್ತು ಇಬ್ಬರು ಮಕ್ಕಳು ಬಾವಿಯಿಂದ ಮೇಲೆ ಬರಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಕೋರಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!