Friday, June 5, 2026
Homeತಾಜಾ ಸುದ್ದಿಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

- Advertisement -
- Advertisement -

ಕೋಲಾರ: ಕೆರೆಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಕೋಲಾರ ತಾಲೂಕಿನ ನರಸಾಪುರದಲ್ಲಿ ನಡೆದಿದೆ.

ತಾಯಿ ನಂದಿತಾ(42) ಮತ್ತು ಮಗಳು ಪ್ರಗತಿ(21) ಮೃತ ದುರ್ದೈವಿಗಳು. ಬೆಂಗಳೂರಿನ ಹೊರಮಾವು ನಿವಾಸಿಗಳಾದ ಇವರು ಬೆಂಗಳೂರಿಂದ ನರಾಸಪುರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂರು ತಿಂಗಳ ಹಿಂದೆ ನಂದಿತಾ ಅವರ ಗಂಡ ಮೃತಪಟ್ಟಿದ್ದರು. ಗಂಡನ ಮನೆಯವರ ಕಿರಕುಳ ಹಾಗೂ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ತನಿಖೆ ಬಳಿಕ ಸಾವಿನ ಕಾರಣ ತಿಳಿಯಲಿದೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಸಾವಿಗೂ ಮುನ್ನ ತಾಯಿ-ಮಗಳು ಡೆತ್​ನೋಟ್​ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

- Advertisement -

Latest News

error: Content is protected !!