Tuesday, April 30, 2024
Homeಕರಾವಳಿಸುಳ್ಯದಲ್ಲಿ ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಪಾಸಾದ ತಾಯಿ ಮಗಳು

ಸುಳ್ಯದಲ್ಲಿ ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಪಾಸಾದ ತಾಯಿ ಮಗಳು

spot_img
- Advertisement -
- Advertisement -

ಸುಳ್ಯ;ತಾಯಿ ಮಗಳು ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಪಾಸಾದ ಅಪರೂಪದ ಘಟನೆ ಸುಳ್ಯದಲ್ಲಿ ನಡೆದಿದೆ.  ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಒಟ್ಟಿಗೆ ಪಾಸಾಗಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ತಮ್ಮ 45ನೇ ವರ್ಷದಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ.

ಮಗಳು ತೃಷಾ ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. 25 ವರ್ಷದ ಹಿಂದೆ ಗೀತಾ ಅವರ ವಿದ್ಯಾಭ್ಯಾಸ ಹೈಸ್ಕೂಲ್ ನಲ್ಲಿ  ಮೊಟಕುಗೊಂಡಿತ್ತು. ಎರಡು ವರ್ಷಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣಗೊಂಡಿದ್ದರು. ಈ ವರ್ಷ ಪಿಯುಸಿ ಪರೀಕ್ಷೆಯನ್ನು ಸುಳ್ಯದ ಗಾಂಧಿನಗರ ಕಾಲೇಜಿನಲ್ಲಿ ಪರೀಕ್ಷೆ ಕಟ್ಟಿ, ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು.

ಗೃಹ ರಕ್ಷಕ ದಳದ ಸಿಬ್ಬಂದಿಯಾಗಿರುವ ಇವರು ಕರ್ತವ್ಯ, ಮನೆಗೆಲಸದ ಬಿಡುವಿನ ವೇಳೆ ಅಭ್ಯಾಸ ನಡೆಸಿದ್ದಾರೆ. ಅಲ್ಲದೆ ಇವರ ಕಲಿಕೆಗೆ ಪೂರಕವಾಗಿ ಕಾಲೇಜಿನ ಉಪನ್ಯಾಸಕರೂ ಪುಸ್ತಕಗಳನ್ನು ನೀಡಿ ಸಹಕರಿಸಿದ್ದಾರೆ. ಅವರಿಗೆ ಗೀತಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!