Friday, March 29, 2024
HomeUncategorizedರಾಜ್ಯದ ಸೊಸೆಯಂದಿರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ; ಅತ್ತೆಯರ ಕೈ ಸೇರಲಿದೆ 2 ಸಾವಿರ ರೂಪಾಯಿ

ರಾಜ್ಯದ ಸೊಸೆಯಂದಿರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ; ಅತ್ತೆಯರ ಕೈ ಸೇರಲಿದೆ 2 ಸಾವಿರ ರೂಪಾಯಿ

spot_img
- Advertisement -
- Advertisement -

ಬೆಳಗಾವಿ: ರಾಜ್ಯದ ಸೊಸೆಯಂದಿರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ ಮನೆಯ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000 ನೀಡುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಈ ಹಣವನ್ನು ಅತ್ತೆಗೆ ನೀಡಲಾಗುತ್ತದೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಹಿಳಾ, ಮಕ್ಕಳ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಯ ಹಣ ಅತ್ತೆಗೆ ಸಿಗಲಿದೆ. ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತದೆ. ಹೀಗಾಗಿ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದಿದ್ದಾರೆ.

ಅತ್ತೆ ಪ್ರೀತಿಯಿಂದ ಬೇಕಾದರೆ ಸೊಸೆಗೆ ಯೋಜನೆಯ ಹಣ ನೀಡಲಿ. ನಾಳೆ ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಆ ಸಭೆಯ ಬಳಿಕ ಗೃಹಲಕ್ಷ್ಮೀ ಯೋಜನೆಯ ಜಾರಿಗೆ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!