Tuesday, July 14, 2026
Homeಕರಾವಳಿಉಡುಪಿಉಡುಪಿ: 5 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ: 5 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

- Advertisement -
- Advertisement -

ಉಡುಪಿ: ನಾಲ್ಕು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು ನಿಟ್ಟೂರಿನಲ್ಲಿ ನಡೆದಿದೆ.

ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು ತನ್ನ 5 ವರ್ಷದ ಮಗನಾದ ಭರತ್‌ನೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಗಂಗಮ್ಮ 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ ಹಾಗೂ ಭರತ್ 3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!