- Advertisement -


- Advertisement -
ಉಡುಪಿ: ಬ್ರಹ್ಮಾವರ ಸಮೀಪ ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಬಸ್ ನಿರ್ವಾಹಕ, ತಕ್ಷಣವೇ ಬಸ್ ನಿಲ್ಲಿಸಿ ಅದರಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.
ಇದರಿಂದಾಗಿ ಭಾರಿ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.
- Advertisement -


