- Advertisement -
- Advertisement -
ಕುಂದಾಪುರ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭಾನುವಾರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಪಕ್ಷದ ಮುಖಂಡರಾದ ಅತುಲ್ ಕುಮಾರ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರು ಗಣ್ಯರನ್ನು ಬರಮಾಡಿಕೊಂಡು ದೇವಸ್ಥಾನದ ವತಿಯಿಂದ ಗೌರವಿಸಿದರು.
- Advertisement -


