- Advertisement -
![]()
- Advertisement -
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಸತ್ಯಾಸತ್ಯತೆ ಬಗ್ಗೆ ಜನರಿಗೆ ಶೀಘ್ರ ತಿಳಿ ಹೇಳುವ ಕೆಲಸವನ್ನು ಎಸ್ಐಟಿ ಮಾಡಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ನಡೆಯುತ್ತಿರುವ ವಿಚಾರವಾಗಿ ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಂಸದ ಬ್ರಿಜೇಶ್ ಚೌಟ, ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿರುವುದನ್ನು ಬಿಜೆಪಿಯವರು ನಾವೆಲ್ಲಾ ಈಗಾಗಲೇ ಸ್ವಾಗತ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಪ್ರಕರಣದ ಸಂಬಂಧ ಆರೋಪ ಮತ್ತು ಪ್ರತ್ಯಾರೋಪಗಳು ನಡೆಯುತ್ತಿದ್ದು, ಸತ್ಯಾಸತ್ಯತೆ ಬಗ್ಗೆ ಹೇಳುವಂತಹ ಕೆಲಸವನ್ನು ಎಸ್ ಐಟಿ ಮಾಡಲಿದೆ ಎಂದೂ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
- Advertisement -


