- Advertisement -


- Advertisement -
ಮಂಗಳೂರು: ದೀಪಾವಳಿ ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಮತ್ತು ಬೆಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ನೈಋತ್ಯ ರೈಲ್ವೆಯ ಹುಬ್ಬಳ್ಳಿ ಪ್ರಧಾನ ಕಚೇರಿ ಹಾಗೂ ಮೈಸೂರು ವಿಭಾಗದ ರೈಲ್ವೆ ಅಧಿಕಾರಿಗಳಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.
ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಾವಿರಾರು ಜನರು ಪ್ರಯಾಣಿಸುವುದರಿಂದ ಸಾಮಾನ್ಯ ರೈಲುಗಳಲ್ಲಿ ಹೆಚ್ಚಿನ ಜನದಟ್ಟಣೆ ಉಂಟಾಗುತ್ತದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಬೆಂಗಳೂರು ಮತ್ತು ಮಂಗಳೂರು ನಡುವೆ ಎರಡೂ ಕಡೆಯಿಂದ ವಿಶೇಷ ರೈಲುಗಳನ್ನು ಓಡಿಸಲು ಅನುಮತಿ ನೀಡಬೇಕು. ಅಲ್ಲದೆ, ರೈಲುಗಳು ಮಂಗಳೂರು ಸೆಂಟ್ರಲ್ ಅಥವಾ ಮಂಗಳೂರು ಜಂಕ್ಷನ್ಗೆ ಸಂಚರಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
- Advertisement -


