ನವದೆಹಲಿ; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರಿಗೆ ಸಂಸದ ಬ್ರಿಜೇಶ್ ಚೌಟ ಧನ್ಯವಾದ ಸಲ್ಲಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಬೆಳಿಗ್ಗೆ ದೆಹಲಿಯಲ್ಲಿರುವ ಅವರ ಕಚೇರಿಯಲ್ಲಿ ಭೇಟಿಯಾಗಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವರ್ಗಾಯಿಸಿದಕ್ಕಾಗಿ ಅವರ ಪೋಷಕರು ಮತ್ತು ನಮ್ಮ ಸಂಘಟನೆಯ ಕಾರ್ಯಕರ್ತರು ಮತ್ತು ಜಿಲ್ಲೆಯ ಜನರ ಪರವಾಗಿ ನನ್ನ ಹೃದಯಸ್ಪರ್ಶಿ ಕೃತಜ್ಞತೆಯನ್ನು ಈ ಸಂದರ್ಭದಲ್ಲಿ ಅರ್ಪಿಸಿದೆನು ಎಂದಿದ್ದಾರೆ.
ನಮ್ಮ ಪ್ರದೇಶದಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ಸೇರಿದಂತೆ ಇತರ ವ್ಯವಸ್ಥೆಗಳು ಬಲವಾಗಿ ಬೇರೂರಿದ ಹಿನ್ನೆಲೆಯಲ್ಲಿ ಇದನ್ನು ಬುಡ ಸಮೇತ ಕಿತ್ತು ಹಾಕುವ ದೃಷ್ಟಿಯಿಂದ ಭಯೋತ್ಪಾದನಾ ನಿಗ್ರಹವನ್ನು ಬಲಪಡಿಸಲು ಅವರ ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದೆನು ಎಂದು ಬರೆದುಕೊಂಡಿದ್ದಾರೆ.


