ಬೆಳ್ತಂಗಡಿ : ನಾಡಿನ ಬಯಲು ಗಣಪನೆಂದು ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರವರು ಸೆ. 29 ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಬೆಳ್ತಂಗಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನಿಮಿತ್ತ ತಾಲೂಕಿಗೆ ಆಗಮಿಸಿದ್ದ ಇವರು, ಪೂರ್ವಭಾವಿಯಾಗಿ ಸಂಕಷ್ಟ ಚತುರ್ಥಿಯ ಶುಭ ದಿನದಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರಂಕಿ, ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಶರತ್, ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಪ್ಯಾಕ್ಸ್) ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಅಳಂಬಿಲ, ಬಾಲಕೃಷ್ಣ ನೈಮಿಷ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವಂತ್ ಗೌಡ ಪುದುವೆಟ್ಟು, ಮಂಡಲ ಎಸ್. ಟಿ ಮೋರ್ಚಾ ಅಧ್ಯಕ್ಷರಾದ ರಾಜೇಶ್ ಎಂ.ಕೆ, ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಶರತ್ ಶೆಟ್ಟಿ ಬೆಳ್ತಂಗಡಿ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ರಂಜಿತ್ ಕೊಕ್ಕಡ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


