Wednesday, June 24, 2026
Homeಕರಾವಳಿಉಡುಪಿಚಿನ್ನ ಖರೀದಿ ಹಾಗೂ ಇವಿ ವಾಹನಗಳ ಬಳಕೆಗೆ ಮೋದಿಯವರ ಕರೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ...

ಚಿನ್ನ ಖರೀದಿ ಹಾಗೂ ಇವಿ ವಾಹನಗಳ ಬಳಕೆಗೆ ಮೋದಿಯವರ ಕರೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮರ್ಥನೆ

- Advertisement -
- Advertisement -

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಪ್ರಧಾನಿ ಮೋದಿಯವರು ಇತ್ತೀಚೆಗೆ ನೀಡಿದ ಚಿನ್ನದ ಖರೀದಿ ನಿಯಂತ್ರಣದ ಕರೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿಯವರು ಚಿನ್ನ ಖರೀದಿಯನ್ನು ಸಂಪೂರ್ಣವಾಗಿ ನಿಷೇಧಿಸಿಲ್ಲ, ಬದಲಾಗಿ ದೇಶದ ಹಿತದೃಷ್ಟಿಯಿಂದ ಅನಿವಾರ್ಯವಿದ್ದಲ್ಲಿ ಮಾತ್ರ ಮತ್ತು ಮಿತವಾಗಿ ಖರೀದಿ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇದರೊಂದಿಗೆ, ಜಾಗತಿಕ ಯುದ್ಧದ ಸನ್ನಿವೇಶಗಳು ದೀರ್ಘಕಾಲ ಮುಂದುವರಿದರೆ ಕಚ್ಚಾ ತೈಲ ಆಮದಿನಲ್ಲಿ ಸಮಸ್ಯೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಮೋದಿಯವರು ಒತ್ತು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಇಂತಹ ದೂರದೃಷ್ಟಿಯ ನಿರ್ಧಾರಗಳನ್ನು ಲೇವಡಿ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು, ರಾಷ್ಟ್ರದ ಹಿತಾಸಕ್ತಿಯನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವುದು ನೋವಿನ ಸಂಗತಿ ಎಂದು ಅವರು ಈ ಸಂದರ್ಭದಲ್ಲಿ ಟೀಕಿಸಿದರು.

- Advertisement -

Latest News

error: Content is protected !!