Wednesday, November 13, 2024
Homeತಾಜಾ ಸುದ್ದಿಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸಂಸದ ಪ್ರಜ್ವಲ್...

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ

spot_img
- Advertisement -
- Advertisement -

ಬೆಂಗಳೂರು: ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸಂಸದ ಪ್ರಜ್ವಲ್ ರೇವಣ್ಣ  ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

 ಮುಂದಿನ ಶುಕ್ರವಾರ ಅಥವಾ ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿರುವ ಅಂದಿನ ಬಿಜೆಪಿಯ ಎ.ಮಂಜು ಅರ್ಜಿ ಸಲ್ಲಿಸಿದ್ದರು.

ಈ ಕುರಿತಾಗಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಚುನಾವಣಾ ಅಕ್ರಮದ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆ.1ರಂದು ಹೈಕೋರ್ಟ್ ತೀರ್ಪು ನೀಡಿತ್ತು.

ಈ ತೀರ್ಪು ಪ್ರಶ್ನಿಸಿ, ಪ್ರಜ್ವಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವೇಣುಗೋಪಾಲ ಅವರು ಪ್ರಜ್ವಲ್ ಪರ ವಾದಿಸಲಿದ್ದಾರೆ.

- Advertisement -
spot_img

Latest News

error: Content is protected !!