Tuesday, April 16, 2024
Homeತಾಜಾ ಸುದ್ದಿ"ಡ್ರಗ್ಸ್​ ಕೇಸ್ ನಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್​ ಬಂಧನ ಯಾಕಿಲ್ಲ?"

“ಡ್ರಗ್ಸ್​ ಕೇಸ್ ನಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್​ ಬಂಧನ ಯಾಕಿಲ್ಲ?”

spot_img
- Advertisement -
- Advertisement -

ಮೈಸೂರು: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ನೇರವಾಗಿ ಆರೋಪಿಸಿರುವವರ ಪಟ್ಟಿಯಲ್ಲಿ ಶಾಸಕ ಜಮೀರ್ ಅಹ್ಮದ್ ಹೆಸರು ಕೂಡ ಇದೆ. ಹೀಗಿದ್ದೂ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ಬಂಧಿಸಿಲ್ಲವೇಕೆ.? ಬಂಧಿಸಿ ವಿಚಾರಣೆ ನಡೆಸಿಲ್ಲವೇಕೆ ಎಂಬುದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪ್ರತಾಪ್​ ಸಿಂಹ, ಡ್ರಗ್ಸ್​ ಪ್ರಕರಣ ಕುರಿತಂತೆ ಸಾಮಾಜಿಕ ಕಾರ್ಯಕರ್ಯ ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಈ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಹೀಗಿದ್ದರೂ ಇದುವರೆಗೂ ಪೊಲೀಸರು ಜಮೀರ್ ಅಹಮ್ಮದ್​​ರನ್ನ ಯಾಕೆ ಬಂಧಿಸಿಲ್ಲ. ಇದರ ಹಿಂದಿನ ಉದ್ದೇಶವೇನು? ಎಂದು ಪೊಲೀಸರಿಗೆ ಪ್ರಶ್ನಿಸಿದ್ಧಾರೆ.

ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿರಬಹುದು. ಬೇಕಾದರೆ ಪ್ರಶಾಂತ್​ ಸಂಬರಗಿಯವರನ್ನು ತನಿಖೆಗೆ ಒಳಪಡಿಸಿ. ಸಂಬರಗಿ ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಪ್ರತಾಪ್​ ಸಿಂಹ ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!