Wednesday, June 3, 2026
Homeತಾಜಾ ಸುದ್ದಿಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಧ್ವನಿ ಎತ್ತಿ ಗಮನ ಸೆಳೆದ ಸಂಸದ ರಾಘವೇಂದ್ರ

ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಧ್ವನಿ ಎತ್ತಿ ಗಮನ ಸೆಳೆದ ಸಂಸದ ರಾಘವೇಂದ್ರ

- Advertisement -
- Advertisement -

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಪರ ಸಂಸದ ಬಿ.ವೈ ರಾಘವೇಂದ್ರ ಧ್ವನಿ ಎತ್ತಿದ್ದಾರೆ. ಇಂದು ಶೂನ್ಯ ವೇಳೆಯಲ್ಲಿ ಅಡಿಕೆ ರೈತರ ಸಮಸ್ಯೆಗಳ ಕುರಿತು ಮಹತ್ವದ ವಿಷಯವನ್ನು ಪ್ರಸ್ತಾಪಿಸಿ, ಸಂಸದ ಬಿ.ವೈ. ರಾಘವೇಂದ್ರ ಸದನದ ಗಮನ ಸೆಳೆದರು.

ಮಲೆ ನಾಡು ಹಾಗೂ ಕರಾವಳಿಯಲ್ಲಿ ಅಡಿಕೆ ಬೆಳೆಗಾರರು ಎಲೆಚುಕ್ಕಿ ರೋಗದಿಂದಾಗಿ ಇಳುವರಿ ಕಳೆದುಕೊಂಡಿದ್ದಾರೆ. ಇದರೊಂದಿಗೆ ಬೆಲೆ ಕೂಡ ಕುಸಿತ ಕಂಡಿದೆ. ಜೊತೆಗೆ ಆಮದು ಅಡಿಕೆಯಿಂದಾಗಿ ಇಲ್ಲೇ ಬೆಳೆಯುವ ಅಡಿಕೆ ಬೆಳೆಗಾರರಿಗೆ ಹೆಚ್ಚು ಹೊಡೆತ ಬೀಳುತ್ತಿದೆ. ಅಡಿಕೆ ಆಮದು ನಿಲ್ಲಿಸಬೇಕೆಂಬ ರೈತರ ಹಲವು ವರ್ಷಗಳ ಕೂಗು ಹಾಗೆ ಮುಂದುವರಿದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯವನ್ನು ವಿಜಯೇಂದ್ರ ಲೋಕಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಂಡಿಸಿದರು.

- Advertisement -

Latest News

error: Content is protected !!