ಬೆಂಗಳೂರು: ಮಧ್ಯ ಪೂರ್ವ ಮತ್ತು ಗಲ್ಪ್ ರಾಷ್ಟ್ರಗಳಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಆರೋಪಿಸಿದ್ದಾರೆ.
ಇತ್ತೀಚಿಗೆ ಕುವೈತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕೇರಳ ಮೂಲದ ಚಾಲಕನ ಮೇಲಿನ ಹಲ್ಲೆಯನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಸಿ ಸಂಸದೆ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಕೇರಳ ಚಾಲಕನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ನಾನು ಅಮಿತ್ ಶಾ ಅವರಿಗೆ ಪತ್ರ ಬರೆದ ನಂತರ ಮಧ್ಯ ಪೂರ್ವ ಮತ್ತು ಗಲ್ಫ್ ರಾಷ್ಟ್ರಗಳಿಂದ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಮತ್ತು ಅಸಭ್ಯವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚಾಲಕನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕುವೈತ್ ಆಡಳಿತ ಕ್ರಮ ತೆಗೆದುಕೊಳ್ಳಬೇಕು ಮತ್ತು ವಿಚಾರಣೆಗಾಗಿ ಆರೋಪಿಗಳನ್ನು ಭಾರತಕ್ಕೆ ಒಪ್ಪಿಸಬೇಕು ಎಂದು ಶೋಭಾ ಕರಂದ್ಲಾಜೆ ಅವರು ಅಮಿತ್ ಶಾಗೆ ಬರದೆ ಪತ್ರ ಒತ್ತಾಯಿಸಿದ್ದರು.