Friday, June 5, 2026
Homeತಾಜಾ ಸುದ್ದಿನಿಷೇಧದ ನಡುವೆಯೂ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ

ನಿಷೇಧದ ನಡುವೆಯೂ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ

- Advertisement -
- Advertisement -

ಮೈಸೂರು: ಸಂಸದೆ ಶೋಭಾ ಕರಂದ್ಲಾಜೆ ಆಷಾಢ ಮಾಸದ ಕೊನೆ ಶುಕ್ರವಾರ ಹಿನ್ನೆಲೆಯಲ್ಲಿ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿದ್ದಾರೆ.

ಶೋಭಾ ಕರಂದ್ಲಾಜೆ ಪ್ರತಿ ಆಷಾಢ ಮಾಸದಲ್ಲೂ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ಚಾಮುಂಡಿಯ ದರ್ಶನ ಪಡೆಯುತ್ತಾರೆ. ಅದರಂತೆಯೇ ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದರು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಟ್ಟಕ್ಕೆ ಹೋಗಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಟ್ಟಕ್ಕೆ ತೆರಳುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮಹಾನಗರ ಪಾಲಿಕೆ ಸದಸ್ಯರು, ಮಾಜಿ ಶಾಸಕರಿಗೂ ಬೆಟ್ಟಕ್ಕೆ ಹೋಗಲು ಅವಕಾಶ ನೀಡುತ್ತಿಲ್ಲ. ಆದರೆ ಸಂಸದೆ ಆದ ಕಾರಣ ಶೋಭಾ ಕರಂದ್ಲಾಜೆಗೆ ಹೋಗಲು ಅವಕಾಶ ನೀಡಿದ್ದೀರಾ? ಎಂದು ಪೊಲೀಸರ ಜೊತೆ ಜನಪ್ರತಿನಿಧಿಗಳು ಮಾತಿನ ಚಕಮಕಿ ನಡೆದಿದೆ.

- Advertisement -

Latest News

error: Content is protected !!