Thursday, June 4, 2026
Homeತಾಜಾ ಸುದ್ದಿಚಾಮರಾಜನಗರ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ನಿಧನ

ಚಾಮರಾಜನಗರ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ನಿಧನ

- Advertisement -
- Advertisement -

ಬೆಂಗಳೂರು; ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76)  ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ.

ಮೂತ್ರಪಿಂಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಹಾಗಾಗಿ‌ ಏಪ್ರಿಲ್ 22ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.‌ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಸೋಮವಾರ ಬೆಳಗಿನ ಜಾವ 1:30ರ ಸುಮಾರಿಗೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ .

ಸದ್ಯ ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇಂದು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಶ್ರೀನಿವಾಸ್ ಪ್ರಸಾದ್, ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್, ಕಳೆದ ಮಾರ್ಚ್ 17 ರಂದು ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

- Advertisement -

Latest News

error: Content is protected !!