Sunday, May 19, 2024
Homeತಾಜಾ ಸುದ್ದಿಹೌರಾದಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಹಿಂಸಾಚಾರ ಖಂಡಿಸಿದ ಸಂಸದ ತೇಜಸ್ವಿ ಸೂರ್ಯ- ಲೋಕಸಭೆಯ ಸ್ಪೀಕರ್‌ಗೆ ಹಕ್ಕುಚ್ಯುತಿ...

ಹೌರಾದಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಹಿಂಸಾಚಾರ ಖಂಡಿಸಿದ ಸಂಸದ ತೇಜಸ್ವಿ ಸೂರ್ಯ- ಲೋಕಸಭೆಯ ಸ್ಪೀಕರ್‌ಗೆ ಹಕ್ಕುಚ್ಯುತಿ ನೋಟಿಸ್‌ ಸಲ್ಲಿಕೆ

spot_img
- Advertisement -
- Advertisement -

ನವದೆಹಲಿ: ಅ.8ರಂದು ಪಶ್ಚಿಮ ಬಂಗಾಳದ ಕೋಲ್ಕತಾ ಹಾಗೂ ಹೌರಾದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಪಾಲ್ಗೊಂಡಿದ್ದರು.ಈ ವೇಳೆ ನಡೆದ ಹಿಂಸಾಚಾರ ನಡೆದಿತ್ತು.ಬಿಜೆಪಿಯ ಪ್ರತಿಭಟನೆ ವೇಳೆ ತೃಣಮೂಲ ಕಾಂಗ್ರೆಸ್‌ನ ಗೂಂಡಾಗಳು ಮಹಡಿಗಳ ಮೇಲೆ ನಿಂತು ಬಾಂಬ್‌ ಎಸೆದಿದ್ದರು.

ಇದಕ್ಕೆ ಸಂಬಂಧಿಸಿದಂತೆ ಆ ಎರಡೂ ನಗರಗಳ ಪೊಲೀಸ್‌ ಆಯುಕ್ತರು ಸೇರಿದಂತೆ ಬಂಗಾಳದ ಅಧಿಕಾರಿಗಳ ವಿರುದ್ಧ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಲೋಕಸಭೆಯ ಸ್ಪೀಕರ್‌ ಅವರಿಗೆ ಹಕ್ಕುಚ್ಯುತಿ ನೋಟಿಸ್‌ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ರಾಸಾಯನಿಕ ಮಿಶ್ರಿತ ನೀರು ಸಿಂಪಡಣೆ ಮಾಡಲಾಗಿತ್ತು. ತೃಣಮೂಲ ಕಾಂಗ್ರೆಸ್‌ ಅಧ್ಯಕ್ಷೆಯ ಪಶ್ಚಿಮ ಬಂಗಾಳದಲ್ಲಿನ ಫ್ಯಾಸಿಸ್ಟ್‌ ಸರ್ಕಾರ ಭಯೋತ್ಪಾದಕರಂತಿದೆ ಎಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆರೋಪಿಸಿದ ತೇಜಸ್ವಿ ಸೂರ್ಯ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದರು.

- Advertisement -
spot_img

Latest News

error: Content is protected !!