Wednesday, June 24, 2026
Homeಅಪರಾಧಮುಡಾ ಹಗರಣ; ಜ.25ಕ್ಕೆ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

ಮುಡಾ ಹಗರಣ; ಜ.25ಕ್ಕೆ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಜ.25ಕ್ಕೆ ಮುಂದೂಡಲಾಗಿದೆ.

ಜಮೀನಿನ ಮೂಲ ಮಾಲೀಕ ದೇವರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜರಿಯಾ ಮತ್ತು ನ್ಯಾ.ಅರವಿಂದ ಕಾಮತ್ ಅವರ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ ಎನ್ನಲಾಗಿದೆ.

ಸಿದ್ಧರಾಮಯ್ಯ ಅವರ ವಿರುದ್ಧ ದೇವರಾಜು ಪರ ಹಿರಿಯ ವಕೀಲ ದುಷ್ಯಂತ ದವೆ ವಾದಿಸಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಏಕಸದಸ್ಯ ನ್ಯಾಯಪೀಠದ ಮುಂದೆ ಡಿಸೆಂಬರ್ 10ಕ್ಕೆ ಬರಲಿದ್ದು, ಈ ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆ ಏಕಸದಸ್ಯ ನ್ಯಾಯಪೀಠಕ್ಕೆ ಸೂಚನೆ ನೀಡಬೇಕು. ಇಲ್ಲವಾದರೆ ನಾನು ಅನಗತ್ಯವಾಗಿ ತೊಂದರೆ‌ಗೆ ಸಿಲುಕಿಕೊಳ್ಳಬೇಕಾಗುತ್ತದೆ ಎಂದು ಕೋರಿದರು. ಆದರೆ ನ್ಯಾಯಪೀಠ ಇಂತಹ ಸೂಚನೆ ನೀಡಲು ನಿರಾಕರಿಸಿತು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!