Saturday, June 6, 2026
Homeಕರಾವಳಿಬೆಳ್ತಂಗಡಿ: ಮುಂಡಾಜೆಯಲ್ಲಿ ನಡೆದ ಪಿಕಪ್-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸಹಸವಾರನೂ ಸಾವು

ಬೆಳ್ತಂಗಡಿ: ಮುಂಡಾಜೆಯಲ್ಲಿ ನಡೆದ ಪಿಕಪ್-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸಹಸವಾರನೂ ಸಾವು

- Advertisement -
- Advertisement -

ಬೆಳ್ತಂಗಡಿ: ಮುಂಡಾಜೆಯ ಪಕ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪಿಕಪ್ -ಬೈಕ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದ, ಇದೀಗ ಬಂದ ಮಾಹಿತಿಯ ಪ್ರಕಾರ ಗಂಭೀರ ಗಾಯಗೊಂಡ ಸಹಸವಾರನೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಸಹಸವಾರ ಉಜಿರೆ ಮುಂಡತ್ತೊಡಿಯ ಪ್ರಶಾಂತ್ ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸೆದೆ ಸಾವನ್ನಪ್ಪಿದ್ದಾರೆ.

ಬೈಕ್ ನಲ್ಲಿ ಬೆಳ್ತಂಗಡಿ ಕಡೆಗೆ ಬರುತ್ತಿದ್ದಾಗ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೆಕ್ ಮಾಡುವ ರಭಸಕ್ಕೆ ಮುಂಡಾಜೆ ಸೀಟ್ ಬಳಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ, ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಶೇಖರ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಸಹಸವಾರ ಮುಂಡತ್ತೊಡಿಯ ಪ್ರಶಾಂತ್ ರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಶಾಂತ್ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!