Friday, April 19, 2024
Homeಕರಾವಳಿಮುಡಿಪು ಪದವಿ ಕಾಲೇಜಿನ ಸಮಸ್ಯೆ ವಿಧಾನಸಭೆಯಲ್ಲಿ ಪ್ರತಿಧ್ವನಿ

ಮುಡಿಪು ಪದವಿ ಕಾಲೇಜಿನ ಸಮಸ್ಯೆ ವಿಧಾನಸಭೆಯಲ್ಲಿ ಪ್ರತಿಧ್ವನಿ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಪ್ರಥಮ ದರ್ಜೆ ಕಾಲೇಜಿನಲ್ಲಿನ ಡೆಪ್ಯುಟೇಷನ್ ಸಮಸ್ಯೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.

ಮಂಗಳೂರು ಶಾಸಕ ಮತ್ತು ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಇಂದು ನಿಯಮ 73ರ ಅಡಿಯಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ.‌

ಓರ್ವ ಪ್ರಾಂಶುಪಾಲರು, ಮೂವರು ಬೋಧಕ ಸಿಬ್ಬಂದಿ ಮತ್ತು ಇಬ್ಬರು ಬೋಧಕೇತರ ಸಿಬ್ಬಂದಿ ನಿಯೋಜನೆ ಮೇರೆಗೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡಿದ್ದಾರೆ. ಇದರಿಂದಾಗಿ ಕಾಲೇಜಿನಲ್ಲಿ ಅರ್ಧದಷ್ಟು ಸಿಬ್ಬಂದಿ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ.

ಸಮಸ್ಯೆ ಕುರಿತು ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ನಿಯೋಜನೆ ವ್ಯವಸ್ಥೆ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

- Advertisement -
spot_img

Latest News

error: Content is protected !!