Monday, June 8, 2026
Homeತಾಜಾ ಸುದ್ದಿಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶ

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್‌ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಇತ್ತೀಚಿಗಷ್ಟೇ ನಿಧನರಾಗಿದ್ದರು. ಸಾಧನಾ ಗುಪ್ತಾ ಅವರು ಮುಲಾಯಂ ಸಿಂಗ್ ಯಾದವ್​ರ 2ನೇ ಪತ್ನಿಯಾಗಿದ್ದರು. ಮುಲಾಯಂ ಸಿಂಗ್ ಯಾದವ್ ಅವರ ಮೊದಲ ಪತ್ನಿ ಮತ್ತು ಅಖಿಲೇಶ್ ಯಾದವ್ ಅವರ ತಾಯಿ ಮಾಲ್ತಿ ಯಾದವ್ 2003 ರಲ್ಲಿ ನಿಧನರಾಗಿದ್ದರು. ಆನಂತರ ಸಾಧನಾ ಗುಪ್ತಾ ಮುಲಾಯಂ ಸಿಂಗ್ ಯಾದವ್ ಅವರನ್ನು ವಿವಾಹವಾಗಿದ್ದರು.

- Advertisement -

Latest News

error: Content is protected !!