Monday, April 29, 2024
Homeತಾಜಾ ಸುದ್ದಿಅಶ್ಲೀಲ ಚಿತ್ರ ಪ್ರಕರಣ: ರಾಜ್ ಕುಂದ್ರಾ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ!

ಅಶ್ಲೀಲ ಚಿತ್ರ ಪ್ರಕರಣ: ರಾಜ್ ಕುಂದ್ರಾ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ!

spot_img
- Advertisement -
- Advertisement -

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಪ್ರಸಾರ ಪ್ರಕರಣದಲ್ಲಿ ಬಂಧಿತರಾದ ಮುಂಬೈ ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹಾಯಕ ರ್ಯಾನ್ ಥೊರ್ಪೆ ಅವರ ಪೊಲೀಸ್ ಕಸ್ಟಡಿಯನ್ನು ಮುಂಬೈ ನ್ಯಾಯಾಲಯ ಜುಲೈ 27ರ ವರೆಗೆ ವಿಸ್ತರಿಸಿದೆ.

ರಾಜ್​ ಕುಂದ್ರಾ ಅವರನ್ನು ಹೆಚ್ಚುವರಿಯಾಗಿ 7 ದಿನ ಪೊಲೀಸ್​ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮ್ಯಾಜಿಸ್ಟ್ರೇಟ್​ ಕೋರ್ಟ್​ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ನೀಡುವ ಆದೇಶ ಹೊರಡಿಸಿದೆ. ಕುಂದ್ರಾ ಜಾಮೀನು ಅರ್ಜಿ ವಿಚಾರಣೆ ಮಾಡಲು ಕೂಡ ನ್ಯಾಯಾಲಯ ನಿರಾಕರಿಸಿದೆ.

ಪೊಲೀಸರ ವಶದಲ್ಲಿದ್ದ ರಾಜ್ ಕುಂದ್ರಾ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಪೊಲೀಸರು ನ್ಯಾಯಾಲಕ್ಕೆ ತಿಳಿಸಿದ್ದಾರೆ. ಜೊತೆಗೆ ಇನ್ನು ತನಿಖೆ ಪ್ರಗತಿಯಲ್ಲಿದ್ದು, ರಾಜ್​ ಕುಂದ್ರಾ ಅವರನ್ನು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ ಕಾರಣದಿಂದ ಈಗ ಮತ್ತೆ ಆರೋಪಿಯನ್ನು ಕಸ್ಟಡಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

- Advertisement -
spot_img

Latest News

error: Content is protected !!