Saturday, January 16, 2021
Home ತಾಜಾ ಸುದ್ದಿ ಮುಂಬೈ: ಸಾಯಿಬಾಬಾ ದೇವಸ್ಥಾನದಲ್ಲಿ ಬೆಂಕಿ ಅವಘಡ, ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಮುಂಬೈ: ಸಾಯಿಬಾಬಾ ದೇವಸ್ಥಾನದಲ್ಲಿ ಬೆಂಕಿ ಅವಘಡ, ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಮುಂಬೈ: ನಗರದ ಕಾಂದಿವಲಿ ಪ್ರದೇಶದಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಗಳನ್ನು ಸುಭಾಷ್ ಖೋಡೆ (25) ಹಾಗೂ ಯುವರಾಜ್ ಪವಾರ್(25) ಎಂದು ಗುರುತಿಸಲಾಗಿದ್ದು, ದುರಂತ ಸಂಭವಿಸಿದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇನ್ನೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾರ್ಟ್‌ ಸರ್ಕಿಟ್‌ನಿಂದಾಗಿ ಈ ದುರಂತ ಸಂಭವಿಸಿರಬಹುದು. ದೇವಸ್ಥಾನದ ಮುಖ್ಯ ಬಾಗಿಲನ್ನು ಬಂದ್‌ ಮಾಡಿ ಮೂವರು ದೇವಸ್ಥಾನದ ಸಂಕೀರ್ಣದೊಳಗೆ ಮಲಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisment -

Latest News

error: Content is protected !!