Saturday, May 18, 2024
Homeಅಪರಾಧಮುಂಬೈ: ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ!

ಮುಂಬೈ: ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ!

spot_img
- Advertisement -
- Advertisement -

ಮುಂಬೈ: ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಆಗಂತುಕರು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಮಾಡಿರುವ ಘಟನೆ ಶುಕ್ರವಾರದಂದು ರಾತ್ರಿ ನಡೆದಿದೆ.

ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ಮಾತನಾಡಿದ ಅನಾಮಿಕ ವ್ಯಕ್ತಿ ಈ ರೀತಿಯ ಬೆದರಿಕೆಯೊಡ್ಡಿದ್ದು, ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್ ಮನೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕುಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಸ್ಫೋಟಕ ಇರಿಸಿರುವುದಾಗಿ ಹೇಳಿದ್ದಾನೆ.

ತಕ್ಷಣ ಎಚ್ಚೆತ್ತ ಮುಂಬೈ ಪೊಲೀಸರು ಕರೆಯನ್ನಾಧರಿಸಿ ಹುಡುಕಾಟ ನಡೆಸಿದರಾದರೂ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಮಟ್ಟದ ಅಧಿಕಾರಿಯೊಬ್ಬರು,ಕರೆ ಬಂದ ನಂತರ ಸರ್ಕಾರಿ ರೈಲ್ವೆ ಪೊಲೀಸರು, ರೈಲ್ವೆ ರಕ್ಷಣಾ ಪಡೆ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಈ ಸ್ಥಳಗಳಿಗೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದ್ದು ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು ಕರೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!