Thursday, June 25, 2026
Homeಅಪರಾಧದಲಿತರ ಮೇಲಿನ ಜಾತಿನಿಂದನೆ ಬಳಿಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ; ಮಹಿಳೆಯಿಂದ ದೂರು ದಾಖಲು 

ದಲಿತರ ಮೇಲಿನ ಜಾತಿನಿಂದನೆ ಬಳಿಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ; ಮಹಿಳೆಯಿಂದ ದೂರು ದಾಖಲು 

- Advertisement -
- Advertisement -

ರಾಮನಗರ: ದಲಿತರ ಮೇಲಿನ ಜಾತಿನಿಂದನೆ ಬಳಿಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಕೇಳಿಬರುತ್ತಿದೆ.

ಈಗಾಗಲೇ ದಲಿತರ ಮೇಲಿನ ಜಾತಿನಿಂದನೆ, ಜೀವಬೆದರಿಕೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ  ಜಾಮೀನು ಪಡೆಯುವ ಪ್ರಯತ್ನದಲ್ಲಿರುವಾಗಲೇ ಅವರಿಗೆ ಮತ್ತೊಂದು ಸಂಕಷ್ಟ ತಲೆದೋರಿದೆ.

ಮಹಿಳೆಯೊಬ್ಬರು ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾನೆ ಎಂದು ಕಗ್ಗಲಿಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.  ಕಗ್ಗಲಿಪುರ ಪೊಲೀಸ್ ಠಾಣೆಗೆ ಬುಧವಾರ ತಡರಾತ್ರಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಕಗ್ಗಲಿಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್‌ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗಿರುವುದಾಗಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು  ಕಗ್ಗಲಿಪುರ ಪೊಲೀಸರು ಮಹಿಳೆ ನೀಡಿದ ದೂರನ್ನು ಆದರಿಸಿ ಮುನಿರತ್ನ, ಆತನ ಗನ್‌ಮ್ಯಾನ್ ವಿಜಯಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!