Thursday, June 4, 2026
Homeತಾಜಾ ಸುದ್ದಿಬೆಳಗ್ಗೆ ರಿಲೀಸ್, ಸಂಜೆ ಮತ್ತೆ ಜೈಲು ಸೇರಿದ ಮುನಿರತ್ನ

ಬೆಳಗ್ಗೆ ರಿಲೀಸ್, ಸಂಜೆ ಮತ್ತೆ ಜೈಲು ಸೇರಿದ ಮುನಿರತ್ನ

- Advertisement -
- Advertisement -

ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡತ್ತು. ಅದರಂತೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಮುನಿರತ್ನ ರಿಲೀಸ್ ಆಗಿದ್ರು. ರಿಲೀಸ್ ಆಗುತ್ತಿದ್ದಂತೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಅವರನ್ನು ಅರೆಸ್ಟ್ ಮಾಡಿದ್ದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನ  ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ.

ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ. ಈ ಮೂಲಕ ಶಾಸಕ ಮುನಿರತ್ನಗೆ ಜೈಲೇ ಗತಿ ಆಗಿದೆ. ಹಾಗಾಗಿ ಬೆಳಗ್ಗೆ ರಿಲೀಸ್ ಆದ ಮುನಿರತ್ನ ಸಂಜೆ ಮತ್ತೆ ಜೈಲು ಸೇರುವಂತಾಗಿದೆ.

- Advertisement -

Latest News

error: Content is protected !!