Friday, August 28, 2026
Homeಕರಾವಳಿಬೆಳ್ತಂಗಡಿ : ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿದ ಪ್ರಕರಣ; ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ...

ಬೆಳ್ತಂಗಡಿ : ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿದ ಪ್ರಕರಣ; ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ‌ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ.  ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!