Thursday, June 4, 2026
Homeಕರಾವಳಿಮಂಗಳೂರು: ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ; ನಾಲ್ವರು ವಶಕ್ಕೆ

ಮಂಗಳೂರು: ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ; ನಾಲ್ವರು ವಶಕ್ಕೆ

- Advertisement -
- Advertisement -

ಮಂಗಳೂರು : ದಾಸರಾದಂದು ಪಾರ್ಟಿ ಮಾಡಲು ಹೋಗಿ ಯುವಕನೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದ ಪಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿಯಾಗಿದ್ದಾನೆ. ಅ.15 ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.

ಇದರಿಂದ ಧನುಷ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟಿದ್ದ ಎಂದು ದೂರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಜೇಸನ್ ಸೇರಿದಂತೆ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇನ್ನೊಬ್ಬ ಆರೋಪಿಗೆ ಶೋಧ ಮುಂದುವರಿದಿದೆ.

- Advertisement -

Latest News

error: Content is protected !!