Friday, June 5, 2026
Homeಕರಾವಳಿಮಂಗಳೂರಿನಲ್ಲಿ ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ : ಯುವಕನ ಸ್ಥಿತಿ ಗಂಭೀರ

ಮಂಗಳೂರಿನಲ್ಲಿ ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ : ಯುವಕನ ಸ್ಥಿತಿ ಗಂಭೀರ

- Advertisement -
- Advertisement -

ಮಂಗಳೂರು:  ನಗರದಲ್ಲಿ ಮತ್ತೆ ಮಾರಕಾಯುಧಗಳು ಝಳಪಿಸಿವೆ. ಕರಾವಳಿಯಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಹೀಗಿರುವಾಗಲೇ ನಿನ್ನೆ ರಾತ್ರಿ ಮಂಗಳೂರಿನ ಯುನಿಟಿ ಆಸ್ಪತ್ರೆಯ ಬಳಿ ನೌಶಾದ್ (30) ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ.

ಕೆಲ ದಿನಗಳ ಹಿಂದೆ ಕಂದಾವರ ಮಸೀದಿ ಸಮೀಪ ಅಬ್ದುಲ್ ಅಜೀಜ್ ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.ಇದೀಗ ಅವರ ಅಳಿಯ ನೌಶಾದ್ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿಯಿಂದ ನೌಶಾದ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ದಾಳಿ ನಡೆಸಿದವರು ಯಾರು, ಯಾಕೆ ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!