Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಗನಿಂದಲೇ ಅಪ್ಪನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ

ಬೆಳ್ತಂಗಡಿಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಗನಿಂದಲೇ ಅಪ್ಪನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ಗ್ರೌಂಡ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಟ್ಯಾಕ್ಸಿ ವಾಹನ ಚಾಲಕ ವಾಸು ಮೂಲ್ಯ ಎಂಬವರ ಮೇಲೆ ಅವರ ಮಗನೇ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದಾನೆ. ಇಂದು ಬೆಳಗ್ಗಿನ ಜಾವ ಅಪ್ಪ ವಾಕಿಂಗ್ ಮಾಡೋದನ್ನು ಕಾದು ಕುಳಿತಿದ್ದ ಮಗ ದಾಳಿ ನಡೆಸಿದ್ದಾನೆ. ದಾಳಿಯಿಂದಾಗಿ ವಾಸು ಮೂಲ್ಯ ಅವರು ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪ್ಪ ಮಗನ ನಡುವೆ ಇದ್ದ ಜಗಳವೇ ಈ ದಾಳಿಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!