Thursday, June 4, 2026
Homeತಾಜಾ ಸುದ್ದಿಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಮೃತದೇಹವನ್ನು ಮೆರವಣಿಗೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಮೃತದೇಹವನ್ನು ಮೆರವಣಿಗೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ

- Advertisement -
- Advertisement -

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಮೃತದೇಹವನ್ನು ಮೆರವಣಿಗೆ ಮಾಡುತ್ತಿದ್ದ ವೇಳೆ ಕೆಲ ಯುವಕರು ಕೇಸರಿ ಧ್ವಜ ಹಿಡಿದು, ಕೆಎಸ್‌ಆರ್‌ಟಿಸಿ ಬಸ್, ಮನೆ ಹಾಗೂ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೆಗ್ಗಾನ್ ಆಸ್ಪತ್ರೆಯಿಂದ ಮೃತನ ನಿವಾಸದವರೆಗೆ ಮೆರವಣಿಗೆ ಮಾಡಲಾಗುತ್ತಿದ್ದು, ಬಸ್ ನಿಲ್ದಾಣದ ಮೂಲಕ ಸೀಗೆಹಟ್ಟಿಯ ನಿವಾಸದವರೆಗೆ ಮೆರವಣಿಗೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮೆರವಣಿಗೆ ವೇಳೆ ನೂರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು. ಆದರೆ ಮೆರವಣಿಗೆಯಲ್ಲಿ ಭಾಗವಹಿಸಿರುವ ಯುವಕರು ಸಿಕ್ಕ-ಸಿಕ್ಕವರ ಮೇಲೆ ಕಲ್ಲು ತೂರಾಟ ನಡೆಸಿದರು. ಜೊತೆಗೆ 2 ಬೈಕ್‌ಗಳಿಗೆ ಹಾಗೂ ಕಾರುಗಳಿಗೆ ಬೆಂಕಿಯನ್ನು ಹಚ್ಚಿದ್ದಾರೆ.

ಅಂಬುಲೆನ್ಸ್ ಮೂಲಕ ಮೃತದೇಹ ರವಾನೆ ಮಾಡುವಾಗಲೇ ಕಾರ್ಯಕರ್ತರು ಅಮರ್ ರಹೇ ಅಮರ್ ರಹೇ ಹರ್ಷ ಅಮರ್ ರಹೇ ಎಂಬ ಉದ್ಘಾರದೊಂದಿಗೆ ಅಂಬುಲೆನ್ಸ್ ಮುಂದೆ ಕೇಸರಿ ಧ್ವಜಗಳನ್ನು ಹಾರಾಟ ನಡೆಸಿದ್ದರು.

ನಿಷೇಧಾಜ್ಞೆ ನಡುವೆಯೂ ಪೊಲೀಸರು ಮೆರವಣಿಗೆಗೆ ಅವಕಾಶ ನೀಡಿದ್ದರು. ಆದರೆ ಪೊಲೀಸರನ್ನೇ ತಳ್ಳಿ ಅಂಗಡಿಗಳಿಗೆ ನುಗ್ಗಿ ಕೆಲ ಯುವಕರು ದಾಂಧಲೆ ನಡೆಸಿದರು. ಮನೆ, ಬ್ಯಾಂಕ್ ಅಂಗಡಿಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಶಿವಮೊಗ್ಗ ನಗರದಲ್ಲಿ ಆತಂಕದ ವಾತಾವರಣ ಉಂಟಾಗಿದೆ.

- Advertisement -

Latest News

error: Content is protected !!