Thursday, June 4, 2026
Homeಕರಾವಳಿಉಡುಪಿಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡಿದ ಹೈಕೋರ್ಟ್

ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಹೈಕೋರ್ಟ್ ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದೆ.

ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಅವರ ಹೆಂಡತಿ, ಮಗ ಹಾಗೂ ಹೆಂಡತಿಯ ಗೆಳೆಯ ಸೇರಿ ಕೊಲೆ ಮಾಡಿ, ಹೋಮದ ಕುಂಡದಲ್ಲೇ ಸುಟ್ಟುಹಾಕಿದ್ದರು.

ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪ್ರಕರಣದಲ್ಲಿ ಮೃತ ವ್ಯಕ್ತಿ ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ , ಈ ಕೊಲೆ ಪ್ರಕರಣದಲ್ಲಿ ಈ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ರಾಜೇಶ್ವರಿ ಶೆಟ್ಟಿ ಮೇಲ್ಮನವಿ ಸಲ್ಲಿಸಿದ್ದರು.

- Advertisement -

Latest News

error: Content is protected !!