- Advertisement -
- Advertisement -
ನವದೆಹಲಿ : ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ತಬ್ಲಿಘಿ ಜಮಾತ್ ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ವ್ಯಕ್ತಿಗಳು ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದರಿಂದ ಸಂಘಟನೆಯ ಮುಖಂಡ ಮೌಲಾನ ಸಾದ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ನಿಜಾಮುದ್ದೀನ್ ಠಾಣಾಧಿಕಾರಿ ಮೌಲಾನಾ ವಿರುದ್ಧ ದೂರು ನೀಡಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಯಮ ಉಲ್ಲಂಘಿಸಿ ಕೊರೊನಾ ಹರಡಿದ್ದಾರೆ ಎಂದು ಆರೋಪಿಸಿದ್ದಾರೆ. ಅದನ್ನು ಆಧರಿಸಿ ಮಾರ್ಚ್ 31 ರಂದು ಕ್ರೈಮ್ ಬ್ರ್ಯಾಂಚ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ದೇಶಾದ್ಯಂತ ತಬ್ಲಿಘಿ ಸಭೆಯಲ್ಲಿ ಭಾಗವಹಿಸಿದ ಹಲವು ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಮೌಲಾನಾ ಸಾದ್ ವಿರುದ್ಧ ಐಪಿಸಿ 304 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
- Advertisement -