Sunday, June 7, 2026
Homeಅಪರಾಧಮಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನಿಂದ ಭೀಕರ ಕೊಲೆ!

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನಿಂದ ಭೀಕರ ಕೊಲೆ!

- Advertisement -
- Advertisement -

ಮಂಗಳೂರು: ತಂದೆ ಮಗ ಸೇರಿಕೊಂಡು ಕ್ಷುಲ್ಲಕ ಕಾರಣಕ್ಕೆ ನೆರೆಮನೆಯ ವ್ಯಕ್ತಿ ಜೊತೆ ಜಗಳವಾಡಿ ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.

ಅವಿನಾಶ್ ಕಿಣಿ , ಕೃಷ್ಣಾನಂದ ಕಿಣಿ ಪ್ರಕರಣದ ಆರೋಪಿಗಳು. ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಕೊಲೆಯಾದವರು.

4 – 5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಮುಂಭಾಗ ಮಂಗಳೂರು ಮನಪಾ ಸಿಮೆಂಟ್ ಹಾಕಿ ಸರಿ ಮಾಡಿದ್ದು ಇದರ ಮೇಲೆ ಬೇರೆಯವರ ಕಾರು ಹೋಗುವ ವಿಚಾರದಲ್ಲಿ ಆರೋಪಿಗಳು ವಿನಾಯಕ ಕಾಮತ್ ಜೊತೆ ಜಗಳವಾಡಿದ್ದರು ಎಂದು ಹೇಳಲಾಗಿದೆ. ನ 3ರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಲವರು ದೀಪಾವಳಿ ಆಚರಿಸುತ್ತಿದ್ದ ಸಂದರ್ಭ ವಿನಾಯಕ್ ರವರು ಅಪಾರ್ಟ್ಮೆಂಟ್ ಕೆಳಗೆ ಹೋಗಿದ್ದಾರೆ. ಈ ಸಂದರ್ಭ ಪಾರ್ಕಿಂಗ್ ಸ್ಥಳದಲ್ಲಿದ್ದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರೊಂದಿಗೆ ಜಗಳವಾಡತೊಡಗಿದ್ದು, ಕೃಷ್ಣಾನಂದ ಕಿಣಿ ತಮ್ಮ ಕೈಯಲ್ಲಿದ್ದ ಚೂರಿಯಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ , ಅವರ ಮಗ ಅವಿನಾಶ್ ಕಿಣಿ ಕೂಡ ದೂಷಿಸುತ್ತಾ ಕೊಲೆಗೆ ಸಹಕರಿಸಿದ್ದಾರೆ ಎಂದು ವಿನಾಯಕ ಕಾಮತ್ ರವರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿನಾಯಕ್ ಕಾಮತ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನ.4ರ 1.45 ರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಬಂದರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!