Sunday, June 7, 2026
Homeಅಪರಾಧಚಿಕ್ಕಮಗಳೂರು: ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ!

ಚಿಕ್ಕಮಗಳೂರು: ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ!

- Advertisement -
- Advertisement -

ಚಿಕ್ಕಮಗಳೂರು: ಯುವಕನನ್ನು ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಿದ ಘಟನೆ ಕಾಫಿನಾಡಾದ ಚಿಕ್ಕಮಗಳೂರಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಪ್ರಕೃತ್(29) ಮೃತ ದುರ್ದೈವಿ. ಈತ ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.

ಜಮೀನು ವಿಚಾರದ ವೈಷಮ್ಯದಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಶ್ವಾನ ದಳ ಸ್ಥಳ ಪರಿಶೀಲನೆ ನಡೆಸಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!