Friday, April 19, 2024
Homeತಾಜಾ ಸುದ್ದಿಹೆಣ್ಣುಮಕ್ಕಳ ದಿನದಂದೇ ವಾಮಾಚಾರದ ನೆಪದಲ್ಲಿ ಹೆತ್ತವರಿಂದ ಕೊಲೆ- ಮಗಳನ್ನು ಕೊಂದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ದಂಪತಿ

ಹೆಣ್ಣುಮಕ್ಕಳ ದಿನದಂದೇ ವಾಮಾಚಾರದ ನೆಪದಲ್ಲಿ ಹೆತ್ತವರಿಂದ ಕೊಲೆ- ಮಗಳನ್ನು ಕೊಂದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ದಂಪತಿ

spot_img
- Advertisement -
- Advertisement -

ಆಂಧ್ರಪ್ರದೇಶ: ಇಲ್ಲಿನ ಮದನಪಲ್ಲಿಯಲ್ಲಿ ಪೋಷಕರೇ ತಮ್ಮ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ್ದಾರೆ. 22 ಮತ್ತು 27 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ಪೋಷಕರು ನಂತರ ಡಂಬಲ್ಸ್ ನಿಂದ ಹೊಡೆದು ಹತ್ಯೆಮಾಡಿದ್ದಾರೆ ಎಂದು ವರದಿಯಾಗಿದೆ.

ಮದನಪಲ್ಲಿ ನಗರದ ಹೊರವಲಯದಲ್ಲಿರುವ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್ ನಿವಾಸಿಗಳಾದ ಪದ್ಮಜಾ ಮತ್ತು ಪುರುಷೋತ್ತಮ್ ನಾಯ್ಡು ಎಂಬ ದಂಪತಿಗಳು ಈ ಕೃತ್ಯ ಎಸಗಿದ್ದು ಈ ಇಬ್ಬರೂ ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ. ಪದ್ಮಜಾ ಖಾಸಗಿ ಶಾಲೆಯಲ್ಲಿ ಉಪಪ್ರಾಂಶುಪಾಲೆಯಾಗಿದ್ದರೆ ಪುರುಷೋತ್ತಮ್ ಸರ್ಕಾರಿ ಶಾಲೆಯೊಂದರಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದನು.

ಇವರ ಹಿರಿಯ ಮಗಳು ಅಲೈಕ್ಯ (27) ಭೋಪಾಲ್ ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದರು. ಕಿರಿಯ ಪುತ್ರಿ ಸಾಯಿ ದಿವ್ಯಾ (22) ಬಿಬಿಎ ಮಾಡಿದ್ದಲ್ಲದೆ ಮುಂಬೈನ ಎಆರ್ ರಹಮಾನ್ ಮ್ಯೂಸಿಕ್ ಶಾಲೆಯ ವಿದ್ಯಾರ್ಥಿಯಾಗಿದ್ದರು. ಈಕೆ ಕೋವಿಡ್ ಲಾಕ್ ಡೌನ್ ನಂತರ ಮನೆಗೆ ಮರಳಿದ್ದರು.

ಇವರ ಮನೆಯಲ್ಲಿ ನಿತ್ಯ ಮಾಟ-ಮಂತ್ರ,ಪೂಜೆಗಳು ನಡೆಯುತ್ತಿದ್ದವಂತೆ. ಇದೀಗ ಮಕ್ಕಳು ಮತ್ತೆ ಹುಟ್ಟಿ ಬರುತ್ತಾರೆ ಎಂಬ ನಂಬಿಕೆಯಿಂದ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪೋಷಕರಿಬ್ಬರೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮದನಪಲ್ಲಿ ಡಿಎಸ್ಪಿ ರವಿ ಮನೋಹರಾಚಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

“ಪ್ರಾಥಮಿಕ ತನಿಖೆಯ ಸಮಯದಲ್ಲಿ, ದಂಪತಿಗಳು ತಮ್ಮ ಹೆಣ್ಣುಮಕ್ಕಳು ಮತ್ತೆ ಜೀವ ಪಡೆಯುತ್ತಾರೆ ಎಂದು ಹೇಳುವ ಮೂಲಕ ಶವಗಳನ್ನು ಒಂದು ದಿನ ಮನೆಯಲ್ಲಿಇರಿಸಲು ಒತ್ತಾಯಿಸಿದ್ದರು.” ಮದನಪಲ್ಲಿ ಡಿಎಸ್ಪಿ ರವಿ ಮನೋಹರ ಚಾರಿ ಹೇಳಿದ್ದಾರೆ.

“ಕಲಿಯುಗವು ಇಂದು ರಾತ್ರಿ ಕೊನೆಗೊಳ್ಳಲಿದ್ದು, ಸತ್ಯಯುಗದ ಆರಂಭ ನಾಳೆ ಆಗಲಿದೆ. ಆ ಸಮಯಕ್ಕೆ ಸರಿಯಾಗಿ ಈ ಇಬ್ಬರೂ ಹೆಣ್ಣುಮಕ್ಕಳು ಪುನರ್ಜನ್ಮ ಪಡೆಯಲಿದ್ದಾರೆ ಹಾಗಾಗಿ ಇವರನ್ನು ಬಲಿ ನೀಡುವಂತೆ ದೈವ ಸಂದೇಶ ನೀಡಿದೆ” ಎಂದು ದಂಪತಿಗಳು ಪೊಲೀಸರಿಗೆ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!