Monday, October 12, 2026
Homeಕರಾವಳಿಮಂಗಳೂರುಮಂಗಳೂರು; ಮೊಬೈಲ್ ಹಾನಿ ಮಾಡಿದ್ದಕ್ಕೆ ವ್ಯಕ್ತಿಯ ಕೊಲೆ: ದೋಷಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಮಂಗಳೂರು; ಮೊಬೈಲ್ ಹಾನಿ ಮಾಡಿದ್ದಕ್ಕೆ ವ್ಯಕ್ತಿಯ ಕೊಲೆ: ದೋಷಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

- Advertisement -
- Advertisement -

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯಲ್ಲಿ 2024ರ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಮೊಬೈಲ್ ವಿಚಾರದ ಗಲಾಟೆ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ (39) ಕೊಲೆಯಾದವರು.

ಆರೋಪಿ ಧರ್ಮರಾಜ್ ಸುವರ್ಣ (50) ಹೊಸದಾಗಿ ಖರೀದಿಸಿದ್ದ ಮೊಬೈಲ್ ಅನ್ನು ಮುತ್ತು ಬಸವರಾಜ ಪಡೆದು ಹಾಳುಗೆಡವಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದು, ಆರೋಪಿಯು ಮರದ ಸೋಂಟೆಯಿಂದ ಹೊಡೆದು ಮುತ್ತು ಬಸವರಾಜನನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದ ಕೋಝಿಕ್ಕೋಡ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದ್ದು, ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಜಗದೀಶ್ ರವರು ಅಕ್ಟೋಬರ್ 12, 2026 ರಂದು ಆರೋಪಿ ಧರ್ಮರಾಜ್ ಸುವರ್ಣನಿಗೆ ಜೀವಾವಧಿ ಶಿಕ್ಷೆ ಹಾಗೂ 15,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ ವಾದ ಮಂಡಿಸಿದ್ದರು.

- Advertisement -

Latest News

error: Content is protected !!