Friday, May 10, 2024
Homeತಾಜಾ ಸುದ್ದಿಸಿಎಂ ಮಗ ಸಿಎಂ ಆದರೆ ತಪ್ಪೇನು; ವಿಜಯೇಂದ್ರ ಸಿಎಂ ಆಗಲಿ ಎಂದ ಸಚಿವ ಮುರುಗೇಶ್ ನಿರಾಣಿ

ಸಿಎಂ ಮಗ ಸಿಎಂ ಆದರೆ ತಪ್ಪೇನು; ವಿಜಯೇಂದ್ರ ಸಿಎಂ ಆಗಲಿ ಎಂದ ಸಚಿವ ಮುರುಗೇಶ್ ನಿರಾಣಿ

spot_img
- Advertisement -
- Advertisement -

ವಿಜಯಪುರ: ಸಿಎಂ ಮಗ ಸಿಎಂ ಆದರೆ ತಪ್ಪೇನು? ವಿಜಯೇಂದ್ರ ಸಿಎಂ ಆಗಲಿ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಅರ್ಹತೆಗಳು ಇವೆ. ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಬಿಎಸ್‍ವೈ ಬಗ್ಗೆ ಮಾತನಾಡಿರುವುದು ಸರಿಯಿಲ್ಲ. ಮೊದಲು ಕಾಂಗ್ರೆಸ್ ಅವರ ಪಕ್ಷವನ್ನು ಸರಿ ಮಾಡಿಕೊಳ್ಳಲಿ. ಯಡಿಯೂರಪ್ಪ ನಮ್ಮ ಪಕ್ಷದ ಮುಖಂಡರು. ಹಾಗೇ ಬಿಜೆಪಿಯಿಂದ ಒಂದು ಕುಟುಂಬದಲ್ಲಿ ಮೂವರಿಗೆ ಸೀಟ್ ನೀಡಿದ್ದು, ದೇಶದ ಇತಿಹಾಸದಲ್ಲೇ ಇಲ್ಲ. ಇದು ಎಲ್ಲರಿಗೂ ಗೊತ್ತಿದೆ. ವಿಜಯೇಂದ್ರ ಹೆಚ್ಚಿನ ಕೆಲಸ ಮಾಡಲಿ, ಬೆಳೆಯಲಿ ಎನ್ನುವುದು ನಮ್ಮ ಆಶಯ. ಮುಂದೆ ಯಡಿಯೂರಪ್ಪ, ಸಂಘ ಪರಿವಾರ, ಹಿರಿಯರ ಆಶೀರ್ವಾದ, ಮಾರ್ಗದರ್ಶನದಿಂದ ಎತ್ತರಕ್ಕೆ ಬೆಳೆಯುತ್ತಾನೆ ಎಂದು ಅಭಿಮತ ವ್ಯಕ್ತಪಡಿಸಿದರು.

ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ. ಅದನ್ನು ನಿರ್ಧಾರ ಮಾಡುವವರು ರಾಜ್ಯ, ರಾಷ್ಟ್ರ ನಾಯಕರಿದ್ದಾರೆ. ಎಲ್ಲಾ ಅರ್ಹತೆಗಳು ವಿಜಯೇಂದ್ರಗೆ ಇರುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!