Monday, June 8, 2026
Homeಅಪರಾಧಫೋಕ್ಸೋ ಕೇಸ್‌ನಲ್ಲಿ ಬಂಧನಕ್ಕೊಳಗಾದ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ

ಫೋಕ್ಸೋ ಕೇಸ್‌ನಲ್ಲಿ ಬಂಧನಕ್ಕೊಳಗಾದ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ

- Advertisement -
- Advertisement -

ಮುರುಘಾ ಶ್ರೀಗಳು ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಜೈಲು ಸೇರಿದ್ದು, ಇದೀಗ ಶರಣರು 14 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಮೊದಲ ಫೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿತ್ತು. ನಿನ್ನೆಯಿಂದಲೇ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಮಂಜೂರಿನ ಪ್ರಕ್ರಿಯೆಗಳು ಆರಂಭವಾಗಿತ್ತು. ಆದರೆ ನ್ಯಾಯಾಲಯದ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಶಿವಮೂರ್ತಿ ಶರಣರಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.

ಇನ್ನು ಚಿತ್ರದುರ್ಗ ಜೈಲಿನಲ್ಲಿ ಮುರುಘಾ ಶ್ರೀಗಳು ಜಾಮೀನಿನ ಪ್ರಕ್ರಿಯೆ ಮುಗಿಸಿದ್ದು ಇದೀಗ ಜೈಲಿನಿಂದ ಹೊರಗಡೆ ಬಂದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!